ಅಲಮೇಲಮ್ಮನ ಶಾಪ.!ಸುಳ್ಳೆಷ್ಟು..ನಿಜ ಎಷ್ಟು..!

ವಿಜಯನಗರದ ಪ್ರತಿನಿಧಿಯಾಗಿ ಶ್ರೀ ರಂಗರಾಯ ಶ್ರೀರಂಗಪಟ್ಟಣದಲ್ಲಿ ಆಳುತ್ತಿದ್ದ ಕಾಲದಲ್ಲಿ ಆತನಿಗೆ ಬೆನ್ನುಫಣಿ ರೋಗಬರುತ್ತದೆ. ಅದರ ನಿವಾರಣೆಗಾಗಿ ಆತ ತನ್ನ ಪತ್ನಿ ಅಲಮೇಲಮ್ಮನ ಜೊತೆ ತಲಕಾಡಿನ ಶ್ರೀ ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಪೂಜೆಗಾಗಿ ಬರುತ್ತಾನೆ.

ಆ ಸಂದರ್ಭದಲ್ಲಿ ರೋಗ ಉಲ್ಬಣಗೊಂಡು ಶ್ರೀರಂಗರಾಯ ತಲಕಾಡಿನಲ್ಲೇ ಸಾವಿಗೀಡಾಗುತ್ತಾನೆ. ಈ ಸಂದರ್ಭ ಉಪಯೋಗಿಸಿಕೊಂಡು ಮೈಸೂರಿನ ರಾಜ ಒಡೆಯರು ಶ್ರೀರಂಗಪಟ್ಟಣವನ್ನು ಆಕ್ರಮಿಸಿಕೊಳ್ಳುತ್ತಾರೆ. ಆಗ ಶ್ರೀರಂಗರಾಯನ ಪತ್ನಿ ಅಲಮೇಲಮ್ಮ ತಲಕಾಡಿನ ಪಕ್ಕದಲ್ಲಿರುವ ಮಾಲಂಗಿ ಗ್ರಾಮದಲ್ಲಿ ನೆಲೆಸುತ್ತಾಳೆ.

ಆದರೆ ಅಮೂಲ್ಯವಾದ ಮುತ್ತಿನ ಮೂಗುತಿಯೊಂದು ಸೇರಿದಂತೆ ಅಲಮೇಲಮ್ಮನ ಎಲ್ಲಾ ಒಡವೆಗಳನ್ನು ಕಿತ್ತುಕೊಳ್ಳಲು ರಾಜ ಒಡೆಯರು ಪ್ರಯತ್ನಿಸಿದಾಗ ಕೋಪಗೊಂಡ ಅಲಮೇಲಮ್ಮ”ತಲಕಾಡು ಮರಳಾಗಿ ಮಾಲಂಗಿ ಮಡುವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಒಡೆವೆಗಳೊಡನೆ ಕಾವೇರಿನದಿಗೆ ಹಾರಿ ಪ್ರಾಣಬಿಡುತ್ತಾಳೆ.

ಹಾಗಾದ್ರೆ ಅಲಮೇಲಮ್ಮನ ಶಾಪ ನಿಜ ಎಷ್ಟು? ಸುಳ್ಳೆಷ್ಟು ತಿಳಿಯೋಣ ಬನ್ನಿ…